Publish Date: Fri, 19 Nov 2021 (19:01 IST)
Updated Date: Fri, 19 Nov 2021 (20:04 IST)
ಮಂಡ್ಯ : ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ದುರ್ಮರಣವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿಯಲ್ಇ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ವೆಂಕಟೇಶ್ (25), ಮುತ್ತಮ್ಮ (45), 30 ವರ್ಷದ ಬಸಮ್ಮಣ್ಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.