Publish Date: Fri, 10 Nov 2017 (10:23 IST)
Updated Date: Fri, 10 Nov 2017 (10:26 IST)
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರೂ ಹಲೆವೆಡೆ ಸಣ್ಣ ಪುಟ್ಟ ಅಹಿತಕರ ಘಟನೆ ನಡೆದಿದೆ.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಡಿಕೇರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಒಂದರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಿರೋಧಿ ಸಮಿತಿ ಮಡಿಕೇರಿ ಬಂದ್ ಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ಬಂದ್ ವಾತಾವರಣವಿದೆ.
ಇನ್ನು, ಮಂಗಳೂರಿನಲ್ಲಿ ಬಿಜೆಪಿ ನಾಯಕರೊಬ್ಬರ ಬಂಧನವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
Krishnaveni
Publish Date: Fri, 10 Nov 2017 (10:23 IST)
Updated Date: Fri, 10 Nov 2017 (10:26 IST)