ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ನಟಿ ತಾರಾ ಪೊಲೀಸರ ಮನವೊಲಿಕೆಯ ನಂತರ ಬೆಂಗಳೂರಿಗೆ ವಾಪಸ್ ಮರಳಿದ್ದಾರೆ.
ಜವನಗೊಂಡನಹಳ್ಳಿಯ ಬಳಿ ನಟಿ ತಾರಾ ಅವರನ್ನು ತಡೆದ ಪೊಲೀಸರು ಪರಿಸ್ಥಿತಿ ಗಂಭೀರವಾಗಿದ್ದರಿಂದ ಬೆಂಗಳೂರಿಗೆ ಮರಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನಟಿ ತಾರಾ ನಗರಕ್ಕೆ ವಾಪಸ್ ಆಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಚಿತ್ರದುರ್ಗದಲ್ಲಿ ಶಾಸಕ ತಿಪ್ಪೆಸ್ವಾಮಿ ನೇತೃತ್ವದಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗಿದೆ. ರಟ್ಟಿನ ಒನಕೆ ಹಿಡಿದ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸುವುದು ಬೇಡ ಎಂದು ಒತ್ತಾಯಿಸಿದ್ದಾರೆ.
ಟಿಪ್ಪು ಜಯಂತಿ ವಿವಾದಕ್ಕೊಳಗಾಗಿದ್ದರಿಂದ ಆಚರಿಸುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈಗಾಗಲೇ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ