Select Your Language

Notifications

webdunia
webdunia
webdunia
webdunia

ಟಿಪ್ಪು ಅತ್ಯಾಚಾರಿ, ಕೊಲೆಗಡುಕ: ಬಿಜೆಪಿ ನಾಯಕರ ವಿರುದ್ಧ ದೂರು ದಾಖಲು

ಟಿಪ್ಪು ಸುಲ್ತಾನ್
ಟಿಪ್ಪು ಸುಲ್ತಾನ್ ನಾಡದ್ರೋಹಿ, ಅತ್ಯಾಚಾರಿ, ಕೊಲೆಗಡುಕ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮತ್ತು ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತಕುಮಾರ್ ಹೆಗಡೆ ಮತ್ತು ಶಾಸಕ ಸಿ.ಟಿ.ರವಿ ವಿರುದ್ಧ ಆಲಂ ಪಾಶಾ ಎನ್ನುವವರು ದೂರು ದಾಖಲಿಸಿದ್ದಾರೆ.
 
ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ 10ನೇ ಎಸಿಎಂಎಂ ಕೋರ್ಟ್‌ನಲ್ಲಿ ಪೊಲೀಸರಿಗೆ ಎಫ್‌‍ಐಆರ್ ದಾಖಲಿಸಲು ನಿರ್ದೇಶನ ಕೋರಿ ದೂರು ದಾಖಲಿಸಿದ್ದಾರೆ. 
 
ಟಿಪ್ಪು ಸುಲ್ತಾನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಿದ್ದೇನೆ ಎಂದು ಆಲಂ ಪಾಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಂದು ಟಿಪ್ಪು ವೇಷಧರಿಸಿ ಇಂದು ವಿರೋಧಿಸುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯ