ಗಡಿ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಪೂರ್ವ ಭಾವಿ ಸಭೆ

ಗುರುವಾರ, 8 ನವೆಂಬರ್ 2018 (18:05 IST)
ಬಿಜೆಪಿಯ ವಿರೋಧದ ನಡುವೆಯೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನ ಗಡಿ ಜಿಲ್ಲೆಯಲ್ಲಿ ಆಚರಣೆ ಮಾಡಲು ಪೂರ್ವ ಸಿದ್ಧತೆ ಸಭೆ ನಡೆಸಲಾಗಿದೆ.

ಚಾಮರಾಜನಗರದಲ್ಲಿ ಟಿಪ್ಪು ಜಯಂತಿ ಆಚರಿಸಲು ಸ್ಥಳೀಯ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಈ ಸಂಬಂಧ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅಧ್ಯಕ್ಷತೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಕುರಿತಾದ ಪೂರ್ವಭಾವಿ ಸಭೆ ನಡೆಸಲಾಯಿತು.

ನವೆಂಬರ್ 10 ರಂದು ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ನಿರ್ದೇಶನದಂತೆ ಟಿಪ್ಪು ಜಯಂತಿಯನ್ನ ಸರಳವಾಗಿ  ಅಚರಿಸಲು ಮುಸ್ಲೀಂ ಸಮುದಾಯದ  ಮುಖಂಡರು ಒಮ್ಮತದಿಂದ ಸಹಮತ ವ್ಯಕ್ತಪಡಿಸಿದರು.
ಸಭೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ, ಟಿಪ್ಪು ಜಯಂತಿ ಕಾರ್ಯಕ್ರಮ ಕುರಿತು ಮಾಧ್ಯಮದವರಿಗೆ ವಿವರ ನೀಡಿದರು‌.

ಜಯಂತಿಯ ದಿನ ಯಾವುದೇ ರೀತಿಯ ಮೆರವಣಿಗೆಗೆ  ಅವಕಾಶವಿರುವುದಿಲ್ಲ ಎಂಬ ನಿರ್ಬಂಧ ಹೇರಲಾಗಿದೆ.  ಎಸ್ಪಿ ಧರ್ಮೇಧ್ರ ಕುಮಾರ್ ಮೀನ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿದ್ದರು.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಉಪಚುನಾವಣೆ ಮೂಲಕ ಇಡೀ ರಾಷ್ಟ್ರಕ್ಕೆ ಸಂದೇಶ ನೀಡಲಾಗಿದೆ ಎಂದ ಉಗ್ರಪ್ಪ