Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿ ಸಭೆ: ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಸೆರೆ

ಟಿಪ್ಪು ಜಯಂತಿ ಸಭೆ: ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಸೆರೆ
ಹುಬ್ಬಳ್ಳಿ , ಗುರುವಾರ, 3 ನವೆಂಬರ್ 2016 (15:15 IST)
ಹುಬ್ಬಳ್ಳಿ: ನಗರದ ಮಿನಿವಿಧಾನಸೌಧದ ತಹಸೀಲ್ದಾರ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ನಡೆಯುತ್ತಿದ್ದ ಸಭೆಯನ್ನು ವಿರೋಧಿಸಿ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಮಧ್ಯಾಹ್ನ 12.30ರ ವೇಳೆ ನಡೆದಿದೆ.

ನ. 10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಲು ರಾಜ್ಯ ಸರಕಾರ ಉದ್ದೇಶಿಸಿದ್ದು, ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಹೇಗೆ ಅದರ ಆಚರಣೆ ನಡೆಯಬೇಖೆನ್ನುವ ಕುರಿತು ತಹಸೀಲ್ದಾರ ಕಚೇರಿಯಲ್ಲಿ ಮುಸ್ಲಿಂ ಮುಖಂಡರ ಸಭೆ ಕರೆಯಲಾಗಿತ್ತು. ತಹಸೀಲ್ದಾರ ಶಶಿಧರ ಮಾಡ್ಯಾಳ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ, ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುತ್ತಿತ್ತು.
 
ವಿಷಯ ತಿಳಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತ ಸಭಾ ಸ್ಥಳಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ ಒದಗಿಸಿದ್ದರಿಂದ, ಅವರನ್ನು ಪ್ರವೇಶ ದ್ವಾರದಲ್ಲಿಯೇ ತಡೆಯಲಾಯಿತು. ಸಂದರ್ಭದಲ್ಲಿ ಪೊಲೀಸರ ಜೊತೆ ಮಾತಿನ ಚಕಮಕಿ ನಡಯಿತು. ನಂತರ ಎಲ್ಲ ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ಯಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ ಆಚರಣೆ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದ ಪರಮೇಶ್ವರ್