Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

Sampriya
ಗುರುವಾರ, 15 ಮೇ 2025 (18:33 IST)
Photo Credit X
ಬೆಂಗಳೂರು: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ಇಂದು ಶಿಕಾರಿಪುರದಲ್ಲಿಬೃಹತ್ ತಿರಂಗಾ ಯಾತ್ರೆಯನ್ನು ನಡೆಸಲಾಯಿತು.

ತಿರಂಗಾ ಯಾತ್ರೆಯ ಪೋಟೋವನ್ನು ಬಿವೈ ವಿಜಯೇಂದ್ರ ಅವರು ಶೇರ್ ಮಾಡಿ ಬರೆದುಕೊಂಡಿದ್ದಾರೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲು ಯೋಜಿಸಿರುವ ಹಿನ್ನೆಲೆಯಲ್ಲಿ ಇಂದು ಶಿಕಾರಿಪುರದಲ್ಲಿ ನಿವೃತ್ತ
ಯೋಧರು, ವಕೀಲರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಕಾರ್ಯಕರ್ತರುಗಳ ನೇತೃತ್ವದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.

ಪೆಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಉಗ್ರ ರಕ್ಕಸರ ವಿರುದ್ಧದ ಬೃಹತ್ ಕಾರ್ಯಾಚರಣೆ ಆಪರೇಷನ್ ಸಿಂಧೂರದ ಮೂಲಕ ಉಗ್ರರನ್ನು ಸದೆಬಡಿದಿರುವ ವೀರ ಯೋಧರಿಗೆ ನೈತಿಕ ಸ್ಥೈರ್ಯ ಹಾಗೂ ಬೆಂಬಲ ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಅಲ್ಲದೇ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಯುದ್ಧ ಆರಂಭವಾಗುವ ಮುನ್ನವೇ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಉಗ್ರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿರುವ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಕಾರ್ಯಾಚರಣೆಗೂ ಬೆಂಬಲ ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಬಿಜೆಪಿ ತಿರಂಗಾ ಯಾತ್ರೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ  ಹನುಮಂತಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಗುರುಮೂರ್ತಿ, ಪುರಸಭಾ ಅಧ್ಯಕ್ಷರಾದ ಸುನಂದಾ ಮಂಜುನಾಥ್, ಉಪಾಧ್ಯಕ್ಷರಾದ ರೂಪಾ ಮಂಜುನಾಥ್, ಸೇರಿದಂತೆ ನಿವೃತ್ತ ಯೋಧರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments