Webdunia - Bharat's app for daily news and videos

Install App

ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ

Sampriya
ಮಂಗಳವಾರ, 15 ಜುಲೈ 2025 (16:38 IST)
Photo Credit X
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆಟೋರಿಕ್ಷಾಗಳ ಪ್ರಯಾಣ ದರ ಏರಿಕೆಗೆ ಕೊನೆಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. 

ಇನ್ಮುಂದೆ ಆಟೋ ಪ್ರಯಾಣ ಕನಿಷ್ಠ ದರವನ್ನು 30 ರೂಪಾಯಿಗಳಿಂದ 36 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.ಅದಲ್ಲದೆ ಏಕಕಾಲದಲ್ಲಿ ಮೂರು ಜನರಷ್ಟೇ ಪ್ರಯಾಣವನ್ನು ಬೆಳಸಬಹುದಾಗಿದೆ. 

ಪರಿಷ್ಕ್ರತ ದರದಂತೆ ಮೊದಲ ಎರಡು ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ ದರ 36 ರೂಪಾಯಿಗಳಿರಲಿದೆ. ಎರಡು ಕಿಲೋಮೀಟರ್ ನಂತರದ ಪ್ರಯಾಣಕ್ಕೆ ಪ್ರತಿ ಕಿಲೋಮೀಟರ್​​ಗೆ ಈ ಮೊದಲು ಇದ್ದ ದರವನ್ನು ₹15 ನಿಂದ ₹18ಕ್ಕೆ ಹೆಚ್ಚಳ ಮಾಡಲಾಗಿದೆ. ಅಂದರೆ ಎರಡು ಕಿ.ಮೀ ನಂತರದ ಪ್ರತಿ ಕಿಲೋಮೀಟರ್ ಪ್ರಯಾಣಕ್ಕೆ 3 ರೂಪಾಯಿ ದರ ಏರಿಸಲಾಗಿದೆ.

ಆಟೋ ಸಂಘಟನೆಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಬಿಬಿಎಂಪಿ ವ್ಯಾಪ್ತಿಗೆ ಒಳಪಡುವಂತೆ ಹೊಸ ಪ್ರಯಾಣ ದರವನ್ನು ಘೋಷಣೆ ಮಾಡಿದ್ದಾರೆ. ಆಗಸ್ಟ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಮುಂದಿನ ಸುದ್ದಿ
Show comments