Webdunia - Bharat's app for daily news and videos

Install App

ಸಚಿವ ಜಾರ್ಜ್ ರಕ್ಷಿಸಲು ಗೃಹ ಸಚಿವರಾಗಿದ್ದೀರಾ?: ಪರಮೇಶ್ವರ್‌ಗೆ ಈಶ್ವರಪ್ಪ ಟಾಂಗ್

Webdunia
ಮಂಗಳವಾರ, 12 ಜುಲೈ 2016 (19:36 IST)
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸಲು ನೀವು ಗೃಹ ಸಚಿವರಾಗಿದ್ದೀರಾ ಎಂದು ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಪ್ರಶ್ನಿಸಿದ್ದಾರೆ.
 
ಮೇಲ್ಮನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಕೈವಾಡವಿದೆ ಎಂದು ರಾಜ್ಯಕ್ಕೆ ಗೊತ್ತಿದೆ. ಅವರನ್ನು ರಕ್ಷಿಸಲು ನೀವು ಗೃಹ ಸಚಿವರಾಗಿದ್ದೀರಾ ?ಎಂದು ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮುನ್ನ ಖಾಸಗಿ ವಾಹಿನಿಯಲ್ಲಿ ಹೇಳಿಕೆ ನೀಡಿರುವ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವಿಧವೆ ಮಹಿಳೆ  ಕೋರ್ಟ್‌ ಮೊರೆ ಹೋಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ವಿಧವೆ ಮಹಿಳೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ರಾಜ್ಯ ಸರಕಾರ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಚಿತ್ರ ಹಿಂಸೆ ನೀಡುತ್ತಿದೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದರು. ಆದರೆ, ತನಿಖೆಯ ಹಾದಿ ತಪ್ಪಿಸಲು ಡೆತ್‌ನೋಟ್‌ನ್ನು ಹರಿದು ಎಸೆಯಲಾಗಿದೆ ಎಂದು ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವವರೆಗೂ ಮತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು  ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments