ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿವಿಗಾಗಿ ಏಕಾಂಗಿ ಹೋರಾಟ ನಡೆಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದ್ದು, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದ್ದು, ಪಕ್ಷೇತರ ಶಾಸಕರು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲು ಒಪ್ಪಂದವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಪಕ್ಷ ಉಳಿವಿಗಾಗಿ ಏಕಾಂಗಿ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಭಿನ್ನಮತ ಎಂಬುದು ದೇವತೆಗಳನ್ನೇ ಬಿಟ್ಟಿಲ್ಲ ಇನ್ನೂ ನಮ್ಮಂತ ಮಾನವರನ್ನು ಬಿಡುತ್ತದೆಯೇ. ಜಪ ಮಾಡಿ ಶಿವನಿಂದ ವರ ಪಡೆದು, ನಂತರ ದೇವತೆಗಳ ಮೇಲೆ ಆಕ್ರಮಣ ಮಾಡಿರುವಂತಹ ನಿದರ್ಶನಗಳು ಇತಿಹಾಸದಲ್ಲಿದೆ ಎಂದು ಪುರಾಣದ ಮೂಲಕ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಬಂಡಾಯ ಶಾಸಕರಿಗೆ ಟಾಂಗ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ