Publish Date: Fri, 27 Apr 2018 (06:44 IST)
Updated Date: Fri, 27 Apr 2018 (06:47 IST)
ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ಸೋಷಿಯಲ್ ಮೀಡಿಯಾ ಮೂಲಕ ತಮ್ಮಗಿಷ್ಟವಾದ ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡುತ್ತಿದ್ದಾರೆ.
ಅದೇರೀತಿ ಇದೀಗ ನಿರ್ದೇಶಕ ಯೋಗರಾಜ್ ಭಟ್ ಅವರು ಒಂದು ಟ್ವಿಟ್ ಮಾಡಿ ಜಗ್ಗೇಶ್ ಗೆ ಓಟ್ ಹಾಕಿ ಎಂದು ಮನವಿ ಮಾಡಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ನಟ ಜಗ್ಗೇಶ್ ಅವರು ಸ್ಪರ್ಧೆ ಮಾಡುತ್ತಿದ್ದು, ಈಗಾಗಲೇ ನಾಮಪತ್ರ ಕೂಡ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಯೋಗರಾಜ್ ಭಟ್ ಅವರು,’ ಸಹೃದಯಿ ಜಗ್ಗೇಶ್, ಈ ಭಾರಿಯ ವಿಧಾನಸಭಾ ಚುನಾವಣೆಗೆ ನಿಂತಿದ್ದು ಜಗ್ಗಣ್ಣಂಗೆ ಓಟ್ ಮಾಡಿ ಗೆಲ್ಲಿಸಿ ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ