Select Your Language

Notifications

webdunia
webdunia
webdunia
webdunia

ದೇವಾಲಯಗಳ ಸುತ್ತಲೂ ತಂಬಾಕು ನಿಷೇಧ!

ದೇವಾಲಯಗಳ ಸುತ್ತಲೂ ತಂಬಾಕು ನಿಷೇಧ!
bangalore , ಶುಕ್ರವಾರ, 15 ಸೆಪ್ಟಂಬರ್ 2023 (15:41 IST)
ದೇವಾಲಯಗಳ ಆವರಣ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇಗುಲಗಳ ಸುತ್ತಮುತ್ತ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಖಾ ದಂತಹ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ. ಈ ನಿಯಮ ಇಲಾಖೆ ವ್ಯಾಪ್ತಿಯ ಎಲ್ಲಾ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ. ದೇವಾಲಯದ ಹೊರಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಖಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಬಳಕೆಗೆ ನಿಷೇಧವಿದ್ದರೂ ಬಳಕೆ ಮಾಡುತ್ತಿದ್ದಾರೆ. ಇದರಿಂದ ದೇವಾಲಯಕ್ಕೆ ಬರುವ ಭಕ್ತರ ಭಾವನೆಗೆ ಧಕ್ಕೆ ಆಗುವುದು ಮಾತ್ರವಲ್ಲದೆ ಕಿರಿಕಿರಿಯಾಗುತ್ತಿದೆ. ಈ ಸಂಬಂಧ ಇಲಾಖೆಗೆ ಹಾಗೂ ದೇವಾಲಯಗಳಿಗೂ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ ವಹಿಸಲಾಗುತ್ತಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅಕ್ಕಿ ಕೊರತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ