Publish Date: Sun, 31 Dec 2017 (08:09 IST)
Updated Date: Sun, 31 Dec 2017 (08:15 IST)
ಬೆಂಗಳೂರು: ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಾಕಷ್ಟು ವಿವಾದಗಳಿಂದ ಒತ್ತಡ ಹಾಗು ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿಗೆ ಅಮಿತ್ ಶಾ ಅವರ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಇಂದು ಅಮಿತ್ ಶಾ ಅವರು ವಿವಿಧ ಸಭೆಗಳನ್ನು ಕರೆದು, ಎಂ.ಪಿ, ಎಂ.ಎಲ್.ಎ. ಗಳ ಜೊತೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಬಗೆಯ ಚರ್ಚೆಗಳನ್ನು ನಡೆಸಲಿದ್ದಾರೆ. ಹಾಗೆ 224 ಅಸೆಂಬ್ಲಿ ಕ್ಷೇತ್ರಗಳ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ಟಿಕೆಟು ನೀಡುವ ಕುರಿತು ಅಮಿತ್ ಶಾ ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲಿದ್ದಾರೆ.
ಬೆಳಿಗ್ಗೆ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ನೇರವಾಗಿ ಯಲಹಂಕ ಸಮೀಪದ ಖಾಸಗಿ ಹೋಟೆಲ್ ಗೆ ಆಗಮಿಸಿ, ಆಮೇಲೆ ಸಭೆಯನ್ನು ಕರೆಯಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ