Daily Horoscope

Select Your Language

Notifications

webdunia
webdunia
webdunia
webdunia

ಇಂದು ಸಂಜೆ ಎಸ್.ಎಂ.ಕೃಷ್ಣ, ಚೆಲುವರಾಯಸ್ವಾಮಿ ಭೇಟಿ

ಎಸ್.ಎಂ.ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಇಂದು ಸಂಜೆ ಭೇಟಿ ಮಾಡುವುದಾಗಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿರುವ ಶಾಸಕ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗುತ್ತಿಲ್ಲ. ಸೌಜನ್ಯಕ್ಕಾಗಿ ಭೇಟಿಯಾಗುತ್ತಿದ್ದೇನೆ. ಕೃಷ್ಣ ಅವರು ಸಾಮಾನ್ಯ ರಾಜಕಾರಣಿಯಲ್ಲ. ಅವರ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ಅವರು ಗೌರವಯುತ ರಾಜಕಾರಣಿ ಎಂದರು. 
 
ಜೆಡಿಎಸ್ ಪಕ್ಷದ 7 ಜನ ಬಂಡಾಯ ಶಾಸಕರ ಮುಂದಿನ ತೀರ್ಮಾನ ಕುರಿತು ನಿರ್ಧರಿಸಿಲ್ಲ. ಎಳು ಜನ ಶಾಸಕರು ಪರಸ್ಪರ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಅಧಿಕೃತವಾಗಿ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಬೇಕಾದರೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಆದರೆ, ಸದ್ಯದ ಸ್ಥಿತಿಯಲ್ಲಿ ರಾಜೀನಾಮೆ ನೀಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. 
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನವರಿ 28ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯಾದವ್ ಕೌಟುಂಬಿಕ ಕಲಹದಲ್ಲಿ ಬಹುದೊಡ್ಡ ಟ್ವಿಸ್ಟ್