ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಮುಷ್ಕರ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳು ಬಂದ್ ಆಗಲಿವೆ.
ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದ 50,066 ಶಾಲೆಗಳು ಬಂದ್ ಆಗುತ್ತಿದ್ದು, ಎಲ್ಲಾ ಶಾಲಾ ಶಿಕ್ಷಕರು ಶಾಲೆಗಳಿಗೆ ಹಾಜರಾಗದೇ ಬೆಳಗ್ಗೆ 10.30 ಕ್ಕೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಯಾ ಜಿಲ್ಲಾ ನಿರ್ದೇಶಕರು ಮತ್ತು ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದ್ದಾರೆ.
2014 ಕ್ಕಿಂತ ಮೊದಲು ನೇಮಕವಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಬಡ್ತಿ ನೀಡಬೇಕು. ಕಾಲಕಾಲಕ್ಕೆ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಆಗ್ರಹಿಸುತ್ತಿದ್ದಾರೆ.