Webdunia - Bharat's app for daily news and videos

Install App

ಇಂದು ಐತಿಹಾಸಿಕ ಬೆಂಗಳೂರು ಕರಗ

Webdunia
ಗುರುವಾರ, 6 ಏಪ್ರಿಲ್ 2023 (16:00 IST)
ಚೈತ್ರ ಪೌರ್ಣಮಿಯ ಬೆಳದಿಂಗಳಲ್ಲಿ ಐತಿಹಾತಿಕ ಬೆಂಗಳೂರು ಕರಗ ಶಕ್ತ್ಯೋತ್ಸವವು ಗುರುವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಿಂದೂ ಪಂಚಾಂಗದ ಪ್ರಕಾರ ಚೈತ್ರ ಪೌರ್ಣಮಿಯ ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಮಧ್ಯರಾತ್ರಿ 12.30ಕ್ಕೆ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಡುವ ಹೂವಿನ ಕರಗವನ್ನು ಈ ಬಾರಿಯೂ ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಹೊರಲಿದ್ದಾರೆ. ಕರಗ ಹೊರಲಿರುವ ಜ್ಞಾನೇಂದ್ರ ಅವರು ಬೆಳಗ್ಗೆ 10.30ಕ್ಕೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗೌಡರು, ಗಣಾಚಾರಿ ಹಾಗೂ ಗಂಟೆ ಪೂಜಾರಿಗಳ ಜತೆ ಮೊದಲನೇ ಸ್ನಾನಘಟ್ಟ ಕಬ್ಬನ್‍ಪಾರ್ಕ್‍ನ ಕರಗದ ಕುಂಟೆಗೆ ತೆರಳಿ ಅಲ್ಲಿ ಪ್ರಥಮ ಪೂಜೆ, ಗಂಗೆ ಪೂಜೆ ಸೇರಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಈ ಮೆರವಣಿಗೆಯು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ, ಬಳೆಪೇಟೆ, ದೊಡ್ಡಪೇಟೆ, ಕುಂಬಾರಪೇಟೆ, ಗೊಲ್ಲರಪೇಟೆ, ಹಲಸೂರು, ಕೆಆರ್‌ ಮಾರುಕಟ್ಟೆ, ಕಾಟನ್‌ಪೇಟೆ ಮತ್ತಿತರ ಪ್ರದೇಶಗಳಲ್ಲಿ ಸುಮಾರು 38 ಕಿ.ಮೀ ಸಂಚರಿಸಿ ಮರಳಿ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಕರಗ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments