Publish Date: Wed, 15 Feb 2023 (18:38 IST)
Updated Date: Wed, 15 Feb 2023 (18:52 IST)
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್ ಇಂಡಿಯಾ-2023 ವೈಮಾನಿಕ ಪ್ರದರ್ಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಯಲಹಂಕ ವಾಯುನೆಲೆಯಲ್ಲಿ ಜರುಗುತ್ತಿರುವ ಏರ್ ಶೋ ವೀಕ್ಷಿಸಲು ಇಂದು ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ನಾಳೆಯಿಂದ ಎರಡು ದಿನ ಸಾರ್ವಜನಿಕರಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಮಧ್ಯಾಹ್ನ 12 ರಿಂದ 1.30ರ ವರೆಗೆ ವೈಮಾನಿಕ ಪ್ರದರ್ಶನವನ್ನ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಸುದ್ದಿಗೋಷ್ಟಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಯಲಿದೆ.