ಬೆಂಗಳೂರು : ಇಂದು 73ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಂಭ್ರಮದಿಂದ ಆಚರಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಹಲವು ಮುಖಂಡರು ಉಪಸ್ಥತರಿದ್ದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ದೇಶದಲ್ಲಿ ಇಂದು ಭಯದ ವಾತಾವರಣ ಇದ್ದು, ಶಾಂತಿ ಬದಲಿಗೆ ವೈಷಮ್ಯ ಬೆಳೆಯುತ್ತಿದೆ. ಕೇಂದ್ರ ಸರ್ಕಾರ ಭಾವಾನಾತ್ಮಕ, ಸುಳ್ಳಿನ ದಾಖಲೆಗಳನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದೆ . ಇದರಿಂದ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲದಂತಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ದೇಶದಲ್ಲಿ ಅಘೋಷಿತ ಪರಿಸ್ಥಿತಿ ನಿರ್ಮಾಣವಾಗಿದೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದವರು ಅಧಿಕಾರಕ್ಕೆ ಬಂದರೆ ಹೀಗೆ ಆಗುತ್ತೆ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಸಾವಿರಾರು ಜನ ಸ್ವಾರ್ಥವಿಲ್ಲದೇ ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ. ಎಲ್ಲರೂ ಜಾತ್ಯಾತೀತ ಮನೋಭಾವವನ್ನ ಬೆಳೆಸಿಕೊಳ್ಳಬೇಕಿದೆ. ಸರ್ವಧರ್ಮವನ್ನ ಗೌರವಿಸಿ ಸಹಬಾಳ್ವೆಯಿಂದ ಬದುಕಬೇಕು ಎಂದು ಹೇಳಿದ್ದಾರೆ.
.