Select Your Language

Notifications

webdunia
webdunia
webdunia
webdunia

ಇಂದು 73 ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ ಹೇಳಿದ್ದೇನು?

ಇಂದು 73 ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಧ್ವಜಾರೋಹಣ ನೆರವೇರಿಸಿದ ಸಿಎಂ ಬಿಎಸ್ ವೈ ಹೇಳಿದ್ದೇನು?
ಬೆಂಗಳೂರು , ಗುರುವಾರ, 15 ಆಗಸ್ಟ್ 2019 (10:24 IST)
ಬೆಂಗಳೂರು : 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದ್ದಾರೆ.




ಬಳಿಕ ಜನರನ್ನುದ್ದೇಶಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ದಿನವಾದ ಇಂದು ದೀಕ್ಷೆ ತೆಗೆದುಕೊಳ್ಳೋಣ. ಪ್ರಕೃತಿಯ ಮುನಿಸು, ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ರಾಜ್ಯ ಸಂಕಷ್ಟದಲ್ಲಿದೆ. ಇದನ್ನು ನಿಭಾಯಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.


ರಾಜ್ಯದ  ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿನ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಾಗೇ ಅನ್ನದಾತರ ಹಿತರಕ್ಷಣೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಲಿದೆ. ನೇಕಾರರು, ಮೀನುಗಾರರ ಸಾಲಮನ್ನಾ ಮಾಡಿದ್ದೇವೆ. ರಾಜ್ಯದಲ್ಲಿ ಶೇ.32ರಷ್ಟು ನೀರಾವರಿ ಸೌಲಭ್ಯವಿದೆ. ನೀರಾವರಿ ಸೌಲಭ್ಯ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಾ ಬಂಧನದಂದು ಗೋವುಗಳಿಗೆ ರಾಖಿ ಕಟ್ಟುವೆ- ಬಿಜೆಪಿ ಶಾಸಕ ಭುಕ್ಕಲ್‌ ನವಾಬ್‌ ಘೋಷಣೆ