Publish Date: Mon, 20 Mar 2023 (11:43 IST)
Updated Date: Mon, 20 Mar 2023 (10:45 IST)
ಬೆಳಗಾವಿ : ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ರಾಹುಲ್ ಗಾಂಧಿ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಸೋಮವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.
ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಭಾನುವಾರ ರಾತ್ರಿಯೇ ಬೆಳಗಾವಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಯುವಕ್ರಾಂತಿ ಸಮಾವೇಶ ಭಾರತ್ ಜೋಡೋ ಯಾತ್ರೆ ಬಳಿಕ ಮೊದಲ ಸಮಾವೇಶವಾಗಿದ್ದು, ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕಿ 50 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.