ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ರೈಲು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಿಗಿದ್ದು, 14 ಅರೆಸೇನಾ ಪಡೆ, 40 ಕೆಎಸ್‌ಆರ್‌ಪಿ ತುಕಡಿ, 30 ಸಿಎಆರ್ ತುಕಡಿ ಹಾಗೂ ಕ್ಷಿಪ್ರ ಕಾರ್ಯಾಪಡೆಗಳನ್ನು ನಿಯೋಜನೆ ಮಾಡಲಾಗಿದೆ. ನಗರದಾದ್ಯಂತ ಇಂದು ಮಧ್ಯ ರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಮುಂದುವರೆಯಲಿದ್ದು, ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯಕ್ತ ಎನ್.ಎಸ್.ಮೇಘರಿಕ ಎಚ್ಚರಿಕೆ ನೀಡಿದ್ದಾರೆ.
ನಗರದ ಎಲ್ಲ ರೈಲ್ವೆ ಸ್ಟೇಷನ್‌ಗಳಲ್ಲಿ ಮಧ್ಯ ರಾತ್ರಿಯಿಂದಲೇ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ರೈಲು ನಿಲ್ದಾಣಗಳಿಗೆ ಕೆಎಸ್‌ಆರ್‌ಪಿ ಮತ್ತು ಸಿಎಆರ್ ತುಕಡೆ ನಿಯೋಜನೆ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ