Select Your Language

Notifications

webdunia
webdunia
webdunia
webdunia

ದೇಶದಾದ್ಯಂತ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

ದೇಶದಾದ್ಯಂತ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ
ಬೆಂಗಳೂರು , ಭಾನುವಾರ, 2 ಸೆಪ್ಟಂಬರ್ 2018 (14:41 IST)
ಬೆಂಗಳೂರು : ಇಂದು ದೇಶದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನ ದೇವಾಲಯಗಳಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿವೆ. ಆದರೆ ರಾಜ್ಯದ ಕೊಡಗು ಜಿಲ್ಲೆಯಲ್ಲಿ ನಡೆದ ವಿಕೋಪದ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.


ಕೃಷ್ಣ ನಗರಿ ಉಡುಪಿಯ ಕೃಷ್ಣನ ದೇವಾಲಯಗಳಲ್ಲಿ ವಿಶೇಷ ಪೂಜಾಗಳು ನಡೆಯುತ್ತಿದ್ದು, ಇಡೀ ಭಕ್ತಸಾಗರವೇ ಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಇಡೀ ಕೃಷ್ಣಮಠವನ್ನು ಹೂವಿನಿಂದ ಅಲಂಕಾರದಿಂದ ಕಂಗೊಳಿಸುತ್ತಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ, ಪುನಸ್ಕಾರ, ಭಜನಾ ಕಾರ್ಯಕ್ರಮಗಳು ನಡೆಯುತ್ತಿವೆ.


ಬೆಂಗಳೂರಿನ ಇಸ್ಕಾನ್‌ ದೇಗುಲ ವಿಶೇಷವಾಗಿ ಅಲಂಕೃತವಾಗಿದ್ದು, ಸಾವಿರಾರು ಜನ ಭಕ್ತರು ಸೇರಿದ್ದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಭಜನೆಗಳನ್ನು ನಡೆಸಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ಗೆಳತಿಯ ತಂದೆಯನ್ನು ಚಾಕುವಿನಿಂದ ಇರಿದ ಭೂಪ