ಶ್ರೀನಿವಾಸ್ ಪ್ರಸಾದ್ ಇಂದು ಬಿಜೆಪಿಗೆ!

Webdunia
ಸೋಮವಾರ, 2 ಜನವರಿ 2017 (11:12 IST)
ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಲಿದ್ದಾರೆ. 
 
ಇಂದು ಬಿಜೆಪಿ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿದ್ದಾರೆ.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರುವುದರಿಂದ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಮರ್ಥ ದಲಿತ ನಾಯಕರ ಕೊರತೆ ನೀಗಿಸಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments