ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರ್ಪಡೆಯಾದರು.
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿದ್ದಾರೆ.
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರುವುದರಿಂದ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಮರ್ಥ ದಲಿತ ನಾಯಕರ ಕೊರತೆ ನೀಗಿಸಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ