Select Your Language

Notifications

webdunia
webdunia
webdunia
webdunia

ಇಂದು ಕೆಆರ್ಎಸ್ ಡ್ಯಾಂ ಮುತ್ತಿಗೆಗೆ ಅನ್ನದಾತರ ಕರೆ

ಇಂದು ಕೆಆರ್ಎಸ್ ಡ್ಯಾಂ ಮುತ್ತಿಗೆಗೆ ಅನ್ನದಾತರ ಕರೆ
ಮಂಡ್ಯ , ಸೋಮವಾರ, 4 ಸೆಪ್ಟಂಬರ್ 2023 (09:05 IST)
ಮಂಡ್ಯ : ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ.

ಇಂದು (ಸೋಮವಾರ) ಕೆಆರ್ಎಸ್ ಡ್ಯಾಂ ಮುತ್ತಿಗೆಗೆ ರೈತರು ಕರೆ ನೀಡಿದ್ದಾರೆ.
ದಿನೇ ದಿನೇ ಸಹನೆ ಕಳೆದುಕೊಳ್ಳುತ್ತಿರುವ ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಿಡಬ್ಲೂಎಂಎ ಆದೇಶದಂತೆ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಸಂಕಷ್ಟದ ಮಧ್ಯೆಯೂ ನೀರು ಬಿಡುತ್ತಿರುವುದಕ್ಕೆ ಮಂಡ್ಯದಲ್ಲಿ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ‘ಕಾವೇರಮ್ಮ ನಮ್ಮನ್ನು ಬಿಟ್ಟೋಗಬೇಡಾ’ ಎಂದು ಕಾವೇರಿ ತಾಯಿಯ ಪ್ರತಿಮೆ ತಬ್ಬಿ ಚಳುವಳಿ ನಡೆಸಿದ್ದಾರೆ.

ಮಳೆ ಇಲ್ಲದೇ ಕಂಗಾಲಾಗಿದ್ದ ಕಾವೇರಿ ವ್ಯಾಪ್ತಿಯ ರೈತರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಳೆದ ಐದು ದಿನಗಳಿಂದ 25 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಸಲಾಗಿದೆ. ಇದರಿಂದ ಐದು ದಿನಗಳಲ್ಲೇ 2 ಟಿಎಂಸಿ ನೀರು ಖಾಲಿಯಾಗಿದೆ. ಕಾವೇರಿ ಪ್ರಾಧಿಕಾರ ಹೇಳಿದಂತೆ ಉಳಿದ 10 ದಿನಗಳ ಕಾಲ ನೀರು ಹರಿಸಿದರೆ, 5 ಟಿಎಂಸಿಗೂ ಅಧಿಕ ನೀರು ತಮಿಳುನಾಡು ಪಾಲಾಗಲಿದೆ.

ರಾಜ್ಯ ಸರ್ಕಾರ ವಾಸ್ತವ ಸ್ಥಿತಿಯನ್ನು ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ವಿಫಲಾಗಿದೆ ಎಂದು ಕಳೆದ 5 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಆರ್ಎಸ್ ಬಳಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘಟನೆಗಳು ಅಹೋರಾತ್ರಿ ಧರಣಿ ನಡೆಸುತ್ತಿವೆ.

ಇನ್ನೂ ಭೂಮಿ ತಾಯಿ ಹೋರಾಟ ಸಮಿತಿ ಶ್ರೀರಂಗಪಟ್ಟಣದಲ್ಲಿ ಪ್ರತಿ ದಿನ ವಿನೂತನ ಪ್ರತಿಭಟನೆ ಮಾಡುತ್ತಿದೆ. ಅತ್ತ ಮಂಡ್ಯದಲ್ಲಿ ರೈತ ಹಿತರಕ್ಷಣ ಸಮಿತಿ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಬಂದ್ : ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ