Publish Date: Sat, 05 Aug 2023 (15:00 IST)
Updated Date: Sat, 05 Aug 2023 (14:03 IST)
ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಈಗಾಗಲೇ ತನ್ನ ನಿಗದಿತ ಪ್ರಯಾಣದಲ್ಲಿ ಮೂರನೇ ಎರಡಷ್ಟು ಹಾದಿ ಕ್ರಮಿಸಿದ್ದು, ಶನಿವಾರ ಸಂಜೆ ಚಂದ್ರನ ಕಕ್ಷೆಗೆ ಸೇರ್ಪಡೆಯಾಗಲಿದೆ. ಆಗಸ್ಟ್ 1ರಂದು ಭೂಮಿಯ ಕಕ್ಷೆಯಿಂದ ಹೊರಕ್ಕೆ ಜಿಗಿದು ಚಂದ್ರನತ್ತ ಪ್ರಯಾಣ ಆರಂಭಿಸಿದ್ದ ಚಂದ್ರಯಾನ ನೌಕೆ, ಇದೀಗ ಚಂದ್ರನ ಕಕ್ಷೆಯನ್ನು ಸೇರಲು ಕ್ಷಣಗಣನೆ ಆರಂಭವಾಗಿದೆ. ಜುಲೈ14ರಂದು ಶ್ರೀಹರಿಕೋಟಾದಿಂದ ನಭಕ್ಕೆ ನೆಗೆದಿದ್ದ ಚಂದ್ರಯಾನ-3 ನೌಕೆಯನ್ನು ಚಂದ್ರನ ಕಕ್ಷೆಗೆ ಸೇರಿಸುವ ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಆ.5ರ ಸಂಜೆ 7 ಗಂಟೆಯ ಮುಹೂರ್ತ ನಿಗದಿಪಡಿಸಿದೆ. ಚಂದ್ರನ ಕಕ್ಷೆಗೆ ಅತ್ಯಂತ ಸನಿಹದಲ್ಲಿ ನೌಕೆ ಇರುವ ಕ್ಷಣ ನೋಡಿಕೊಂಡು ಲೂನಾರ್ ಆರ್ಬಿಟ್ ಇಂಜೆಕ್ಷನ್ ಕೈಗೊಳ್ಳಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.