Select Your Language

Notifications

webdunia
webdunia
webdunia
webdunia

ಇಂದು, ನಾಳೆ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ

Corporation Boards
ಇಂದು, ನಾಳೆ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ನಡೆಯಲಿದೆ,ಪರೀಕ್ಷಾ ಅಕ್ರಮಗಳಿಂದ ಎಚ್ಚೆತ್ತುಕೊಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಕಲು ತಡೆಯಲು ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಎಲ್ಲ ಪರೀಕ್ಷಾ ಕೇಂದ್ರಗಳ ಬಳಿತಪಾಸಣೆಗೆ‌ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು, ಮೆಟಲ್ ಡಿಟೆಕ್ಟರ್ ಬಳಕಸಲಾಗುತ್ತಿದೆ.

ಈ ಪರೀಕ್ಷೆಯಲ್ಲಿ ಹಿಜಾಬ್ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತಲೆಯ ಮೇಲೆ ಬಟ್ಟೆ, ಟೋಪಿ, ಮುಖಕ್ಕೆ ಮಾಸ್ಕ್​ ಧರಿಸುವಂತಿಲ್ಲ, ಪೂರ್ತಿ ತೋಳಿನ ಅಂಗಿ ಧರಿಸುವಂತಿಲ್ಲ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಈ ಬಾರಿ ಮಹಿಳಾ ಅಭ್ಯರ್ಥಿಗಳಿಗೆ ಮಾಂಗಲ್ಯ ಮತ್ತ ಕಾಲುಂಗರ ಧರಿಸಲು ಅವಕಾಶ ನೀಡಲಾಗಿದೆ. ಕಳೆದ ಬಾರಿ ಎಫ್ ಡಿಎ ಪರೀಕ್ಷೆಯ ವೇಳೆಯಲ್ಲಿ ಕೆಲವು ಕೇಂದ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಮಾಂಗಲ್ಯ ಮತ್ತು ಕಾಲುಂಗರ ತೆಗೆಸಿದ್ದು ವಿವಾದಕ್ಕೆ ಕಾರಣವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು