Webdunia - Bharat's app for daily news and videos

Install App

ಮಹಿಳಾ ಪೊಲೀಸರಿಗೆ ಶೌಚಾಲಯ ಸಹಿತ ಬಸ್

Webdunia
ಶನಿವಾರ, 28 ಜನವರಿ 2017 (08:59 IST)
ರಾಜ್ಯದ ಮಹಿಳಾ ಪೊಲೀಸರಿಗೊಂದು ಸಿಹಿ ಸುದ್ದಿ. ವಿಶೇಷ ಸಂದರ್ಭಗಳಲ್ಲಿ ಬಂದೋಬಸ್ತ್‌ಗೆ ನಿಯೋಜನೆಗೊಳ್ಳುವ  ಮಹಿಳಾ ಪೊಲೀಸ್ ಸಿಬ್ಬಂದಿಗೆ ಅನುಕೂಲವಾಗಲೆಂದು ಶೌಚಗೃಹ ಮತ್ತು ವಿಶ್ರಾಂತಿ ವ್ಯವಸ್ಥೆ ಇರುವ ವಿಶೇಷ ವಾಹನಗಳನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. 
ಅತ್ಯಾಧುನಿಕ ಸೌಲಭ್ಯಗಳುಳ್ಳ 102 ಹೊಸ ವಾಹನಗಳನ್ನು ಪೊಲೀಸ್ ಮೀಸಲು ಪಡೆಗೆ ಹಸ್ತಾಂತರಿಸಿ ಗುರುವಾರ ಮಾತನಾಡುತ್ತಿದ್ದ ಅವರು, ರಾಜ್ಯದ ಪೊಲೀಸರು ಬಂದೋಬಸ್ತ್‌ಗೆ ನಿಯೋಜನೆಗೊಳ್ಳುವ ಸಂದರ್ಭದಲ್ಲಿ ಮಹಿಳಾ ಪೊಲೀಸರು ಕೆಲವೊಮ್ಮೆ ಮೌಲಸೌಕರ್ಯಗಳಿಲ್ಲದೆ ಸಮಸ್ಯೆಯನ್ನು ಎದುರಿಸುತ್ತಾರೆ. ಇಂತವರಿಗಾಗಿ ರಾಜಸ್ಥಾನದಲ್ಲಿರುವಂತೆ ಶೌಚಾಲಯ ಸೌಲಭ್ಯವಿರುವ ಬಸ್‌ಗಳನ್ನು ಒದಗಿಸಲಾಗುವುದು ಎಂದಿದ್ದಾರೆ. 
 
ಸಾರ್ವಜನಿಕರು ನಿರ್ಭಯವಾಗಿ ಬದುಕುವ ವಾತಾವರಣ ನಿಮ್ಮಿಂದ ನಿರ್ಮಾಣವಾಗಬೇಕು. ಕಾನೂನಿನ ಬಗ್ಗೆ ಗೌರವ ಮತ್ತು ಕಾನೂನು ಉಲ್ಲಂಘಿಸಬಾರದು ಎಂಬ ಕಾಳಜಿ ಪ್ರತಿಯೊಬ್ಬರಲ್ಲೂ ಇದ್ದರೆ ಅಪರಾಧಗಳ ನಿಯಂತ್ರಣ ಸಾಧ್ಯ, ಎಂದು ಇದೇ ಸಂದರ್ಭದಲ್ಲಿ ಸಿಎಂ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments