ನಾಳೆ ಗಣಿನಾಡಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

Webdunia
ಗುರುವಾರ, 26 ಏಪ್ರಿಲ್ 2018 (17:44 IST)
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ನಡೆಸುತ್ತಿರುವ ಕರುನಾಡ ಯಾತ್ರೆ ಭಾಗವಾಗಿ  ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಗಣಿನಗರಿ ಬಳ್ಳಾರಿಗೆ ನಾಳೆ ಭೇಟಿ ನೀಡಲಿದ್ದಾರೆ.
ಈ ಕುರಿತು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.​ ಯಡಿಯೂರಪ್ಪ ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಅಮಿತ್​ ಶಾ ಅವರು  ಬೆಳಗ್ಗೆ 10. 30 ಕ್ಕೆ ನಗರದ ಅಧಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
 
ನಂತರ ಕನಕದುರ್ಗಮ್ಮ ದೇವಸ್ಥಾನದಿಂದ ಬೆಂಗಳೂರು ರಸ್ತೆವರೆಗೆ ನಡೆಯುವ ರೋಡ್​ ಶೋನಲ್ಲಿ ಭಾಗಿಯಾಗಿ ಬಿಜೆಪಿ ಪರ ಮತ ಯಾಚನೆ ನಡೆಸಲಿದ್ದಾರೆ. ಈ ಸಂದರ್ಭ ರಾಜ್ಯಾಧ್ಯಕ್ಷ ಬಿ. ಎಸ್.​ ಯಡಿಯೂರಪ್ಪ, ಜಿಲ್ಲಾ ಬಿಜೆಪಿ ಮುಖಂಡರು, ನಗರ ಕ್ಷೇತ್ರದ ಅಭ್ಯರ್ಥಿ ಜಿ. ಸೋಮಶೇಖರ ರೆಡ್ಡಿ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಸಣ್ಣಫಕೀರಪ್ಪ ಸಾಥ್​ ನೀಡಲಿದ್ದಾರೆ.
 
ಆ ನಂತರ ಅಮಿತ್​ ಶಾ ಮತ್ತು ಬಿಎಸ್​ವೈ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಜಿಲ್ಲೆಯ ಕುಕನೂರಿನಲ್ಲಿ ಮಧ್ಯಾಹ್ನ 4 ಗಂಟೆಗೆ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments