Select Your Language

Notifications

webdunia
webdunia
webdunia
webdunia

ನಾಳೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ

ನಾಳೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2016 (19:32 IST)
ಪಕ್ಷ ಸಂಘಟನೆ ಸೇರಿದಂತೆ ಮುಂಬರುವ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಲು ನಾಳೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ ಕರೆಯಲಾಗಿದೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ವಿವಾದ ಮತ್ತು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸರಕಾರದ ಮುಂದಿನ ನಡೆಯ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
 
ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲ ಪಡಿಸುವುದು ಮತ್ತು ಬೂತ್ ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆಯ ಕುರಿತು ನಾಯಕರು ಚರ್ಚೆ ನಡೆಸಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ ಅರ್ಜಿಯ ವಿಚಾರಣೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕಾರಣಿ ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆ ಪುಣ್ಯಾತ್ಮ ಮೋದಿಗೆ ಏಷ್ಟು ಹೇಳಿದರು ಕೇಳುವುದಿಲ್ಲ: ಸಿಎಂ