Publish Date: Wed, 05 Jul 2017 (19:03 IST)
Updated Date: Wed, 05 Jul 2017 (19:05 IST)
ನಾಳೆ ಮತ್ತು ನಾಡಿದ್ದು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು ಸಭೆಯಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇವೇಗೌಡರು ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ನಾಯಕರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ರಾಜ್ಯದಾದ್ಯಂತ ಪ್ರವಾಸ ಮಾಡುವ ಬಗ್ಗೆ ಕೂಡಾ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದರು.
ವಿಜಯಪುರದಲ್ಲಿ ಹಿಂದೆಂದು ಆಗದಂತಹ ರೈತರ ಸಮಾವೇಶ ಮಾಡಲು ಪಕ್ಷ ನಿರ್ಧರಿಸಿದೆ. ಶಾಸಕ ಮಧು ಬಂಗಾರಪ್ಪ ನೇತೃತ್ವದ ತಂಡವೊಂದು ರಾಜ್ಯ ಪ್ರವಾಸ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.