Select Your Language

Notifications

webdunia
webdunia
webdunia
webdunia

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

Karnataka Rain Alert
ಬೆಂಗಳೂರು: ನಾಳೆ ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಬಿಟ್ಟು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 

ಇನ್ನೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್