ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಸಚಿವರು, ಕರ್ನಾಟಕ ಪರ ವಕೀಲರಾದ ಪಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಮುಂದಾಗಿದ್ದಾರೆ.
ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ.ಜಯಚಂದ್ರ, ಬೃಹತ್ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಅಡ್ವೋಕೇಟ್ ಜನರಲ್ ಅವರು ಕರ್ನಾಟಕ ರಾಜ್ಯ ಪರ ವಾದ ಮಂಡಿಸಿದ್ದ ನಾರಿಮನ್ ಅವರನ್ನು ನಾಳೆ ಭೇಟಿ ಮಾಡಲಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.