ನಾಳೆ ಸಂಜೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.
13 ಸಚಿವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಆದೇಶಿಸಿದ್ದಾರೆ.
ನೂತನ 13 ಸಚಿವರು ನಾಳೆ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೋಮುವಾರದಂದು ಆಯಾ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಸಂಪುಟ ಪುನಾರಚನೆಯಲ್ಲಿ ಅಂಬರೀಶ್, ವಿ.ಶ್ರೀನಿವಾಸ್ ಪ್ರಸಾದ್ ಸೇರಿದಂತೆ 13 ಸಚಿವರನ್ನು ಕೈಬಿಟ್ಟಿರುವುದು, ಸಚಿವರ ಬೆಂಬಲಿಗರನ್ನು ಕೆರಳಿಸಿದ್ದು, ಕೆಲವೆಡೆ ಭಾರಿ ಪ್ರತಿಭಟನೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಚಿವರ ಬೆಂಬಲಿಗರು ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ