Publish Date: Tue, 05 Sep 2017 (19:50 IST)
Updated Date: Tue, 05 Sep 2017 (19:52 IST)
ಮಂಗಳೂರು ಚಲೋ ಕುರಿತಂತೆ ನಾಳೆ ಕೂಡಾ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಾಳೆ ಕೂಡಾ ಪ್ರತಿಭಟನೆ ನಡೆಸುತ್ತೇವೆ. ಒಂದು ವೇಳೆ, ಸರಕಾರ ಪ್ರತಿಭಟನೆ ತಡೆಯಲು ಮುಂದಾದಲ್ಲಿ ನ್ಯಾಯಾಲಯದ ಮೊರೆಹೋಗುತ್ತೇವೆ. ಸರಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.
ಡಿವೈಎಸ್‌ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಅವರ ತಂದೆ ಕುಶಾಲಪ್ಪ ಅವರಿಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಸಚಿವ ಕೆ.ಜೆ.ಜಾರ್ಜ್, ಇಬ್ಬರು ಐಪಿಎಸ್ ಅಧಿಕಾರಿಗಳು ಕೂಡಲೇ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವ ರಮಾನಾಥ್ ರೈ ಮತ್ತು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲದು. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.