Publish Date: Tue, 21 Mar 2017 (14:16 IST)
Updated Date: Tue, 21 Mar 2017 (14:20 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಎಸ್.ಎಂ.ಕೃಷ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.
ಎಸ್.ಎಂ. ಕೃಷ್ಣ ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಸೇರ್ಪಡೆಯಾಗುವ ಮಾಹಿತಿ ಪಡೆದ ಯಡಿಯೂರಪ್ಪ, ಅವರಿಗೆ ದೂರವಾಣಿ ಕರೆ ಮಾಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ಅಭಿನಂದನೆಗಳು ತಿಳಿಸಿದ್ದಾರೆ.
ಉಪಚುನಾವಣೆ ಪ್ರಚಾರದಲ್ಲಿ ಬಿಜಿಯಾಗಿದ್ದರಿಂದ ಪಕ್ಷ ಸೇರ್ಪಡೆ ವೇಳೆ ನವದೆಹಲಿಗೆ ಬರಲು ಆಗುತ್ತಿಲ್ಲ ಎಂದು ಕೃಷ್ಣ ಅವರಿಗೆ ಬಿಜೆಪಿ ರಾಜ್ಯಾಧ್ಕ್ಷಕ್ಷ ಬಿ.ಎಸ್.ಯಡಿಯೂರಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.