Publish Date: Sun, 19 Mar 2017 (13:34 IST)
Updated Date: Sun, 19 Mar 2017 (13:36 IST)
ನಾಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನವದೆಹಲಿಗೆ ತೆರಳುತ್ತಿದ್ದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಿದ್ದು, ಅಮಿತ್ ಶಾ ಅವರ ಭೇಟಿಯ ನಂತರ ರಾಷ್ಟ್ರ ನಾಯಕರ ಸಮ್ಮುಖದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಎಸ್‌ಎಂ.ಕೃಷ್ಣ ನವದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿ ರಾಜ್ಯದ ಹಿರಿಯ ನಾಯಕರು ಕೂಡಾ ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
ಕೃಷ್ಣ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೃಷ್ಣ ಪ್ರಭಾವ ಹೊಂದಿರುವುದರಿಂದ ಪಕ್ಷದ ಗೆಲುವು ಖಚಿತ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.