ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಆಯ್ಕೆ ಮಾಡದಂತೆ ರಾಜ್ಯದಲ್ಲಿ ಕನ್ನಡಿಗರಿಂದ ಅಭಿಯಾನವೇ ಪ್ರಾರಂಭವಾಗಿದ್ದರು, ಭಾರತೀಯ ಜನತಾ ಪಾರ್ಟಿ ವೆಂಕಯ್ಯ ನಾಯ್ಡು ಅವರ ಹೆಸರನ್ನೇ ಅಂತಿಮಗೊಳಿಸಿದೆ.
ಬಿಜೆಪಿ ಪಕ್ಷ ಆಂಧ್ರಪ್ರದೇಶ ಮೂಲದ ರಾಜಕಾರಣಿ ವೆಂಕಯ್ಯ ನಾಯ್ಡು ಅವರನ್ನೇ ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಿರ್ಧರಿಸಿದ್ದು, ನಾಳೆ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದು ನಮ್ಮ ಪಕ್ಷದ ಕಥೆಯಲ್ಲ. ಎಲ್ಲಾ ಪಕ್ಷಗಳಿಗೂ ಅನ್ವಯಿಸುತ್ತೆ. ದೇಶದ ಎಲ್ಲ ಭಾಗಗಳಿಗೂ ಅನ್ವಯಿಸುತ್ತದೆ. ಆದರೆ, ಈ ಕುರಿತು ಅನಗತ್ಯವಾಗಿ ಕೆಲವರು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
18 ವರ್ಷಗಳಿಂದ ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ವೆಂಕಯ್ಯ ನಾಯ್ಡು ಅವರು ರಾಜ್ಯಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಅವರ ಸಾಧನೆಯ ಕುರಿತು ಜನರಿಗೆ ಮನವರಿಕೆ ಮಾಡಲು ನಾಳೆ ವೆಂಕಯ್ಯ ನಾಯ್ಡು ಸಾಧನೆಯ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ವೆಂಕಯ್ಯ ನಾಯ್ಡು ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.