Select Your Language

Notifications

webdunia
webdunia
webdunia
Saturday, 12 April 2025
webdunia

ಚನ್ನಪಟ್ಟಣದಲ್ಲಿ ರಂಗೇರಿದ ಪ್ರಚಾರ

ಚನ್ನಪಟ್ಟಣ
ಬೆಂಗಳೂರು , ಸೋಮವಾರ, 30 ಏಪ್ರಿಲ್ 2018 (13:08 IST)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ರಾಜಕಾರಣ. ಅಭ್ಯರ್ಥಿಗಳ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಪೋಸ್ಟ್ಸ್ ವೈರಲ್ ಆಗಿವೆ.‌ 
ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅಫಿಡವಿಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನೆ ವಿಳಾಸದ ವಿಚಾರವಾಗಿ ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. 
 
ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಮನೆ ವಿಳಾಸದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 
 
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಎಂ.ರೇವಣ್ಣ ಬೆಂಗಳೂರಿನ ನಿವಾಸದಲ್ಲಿರುವುದಾಗಿ ಅಫಿಡವಿಟ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮದ ಮನೆಯಲ್ಲಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. 
 
ಇದೇ ವಿಚಾರವನ್ನಿಟ್ಟುಕೊಂಡು ಕಾರ್ಯಕರ್ತರ ನಡುವೆ ಭಾರಿ ಚರ್ಚೆ ನಡೆದಿದೆ. ಹೊರಗಿನವರು,  ಸ್ಥಳಿಯರು ಎಂಬ ಭಾವನೆ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರು. ಹೊರಗಿನವರನ್ನ ತಿರಸ್ಕರಿಸಿ, ಸ್ಥಳಿಯರಿಗೆ ಮನ್ನಣೆ ಕೊಡಿ ಎಂದು ಸಂದೇಶ ರವಾನಿಸುತ್ತಿರುವ ಸಿ.ಪಿ.ಯೋಗೇಶ್ವರ್ ಬೆಂಬಲಿಗರಿಂದ ಚರ್ಚೆ ಬಿಸಿಯೇರುತ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಪ್ರಚಾರದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ