Select Your Language

Notifications

webdunia
webdunia
webdunia
webdunia

ಘಟಾನುಘಟಿಗಳಿಂದ ಇಂದು ನಾಮಪತ್ರ ಸಲ್ಲಿಕೆ

ಘಟಾನುಘಟಿಗಳಿಂದ ಇಂದು ನಾಮಪತ್ರ ಸಲ್ಲಿಕೆ
ಶಿವಮೊಗ್ಗ , ಗುರುವಾರ, 19 ಏಪ್ರಿಲ್ 2018 (09:04 IST)
ಶಿವಮೊಗ್ಗ:ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಶಿಖಾರಿಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಕೇಂದ್ರ ನಾಯಕರು ಅವರಿಗೆ ಸಾಥ್ ನೀಡಲಿದ್ದಾರೆ.

ಬಿಜೆಪಿಯ ಇನ್ನೋರ್ವ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.  ಈ ವೇಳೆ ಅವರಿಗೆ ಜಗದೀಶ್ ಶೆಟ್ಟರ್ ಜತೆಯಾಗಲಿದ್ದಾರೆ.

ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಪುತ್ರ, ಮಧು ಬಂಗಾರಪ್ಪ ಕೂಡಾ ಇಂದೇ ನಾಮ ಪತ್ರ ಸಲ್ಲಿಸಲಿದ್ದಾರೆ. ಮಧು ಬಂಗಾರಪ್ಪಗೆ ಎದುರಾಳಿಯಾಗಿ ಈ ಬಾರಿ ಅವರ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

‘ನಾನು ಮೋದಿ, ಪಾಕಿಸ್ತಾನಕ್ಕೆ ಹೇಗೆ ಪಾಠ ಕಲಿಸಬೇಕೆಂದು ನನಗೆ ಚೆನ್ನಾಗಿ ಗೊತ್ತಿದೆ’