Select Your Language

Notifications

webdunia
webdunia
webdunia
webdunia

ಉತ್ತರ ಒಳನಾಡು, ಕರಾವಳಿಯಲ್ಲಿ ಮುಂದಿನ ಐದು ದಿನ ಧಾರಾಕಾರ ಮಳೆ ಸಾಧ್ಯತೆ

India Meteorological Department

Sampriya

ಬೆಂಗಳೂರು , ಶುಕ್ರವಾರ, 11 ಅಕ್ಟೋಬರ್ 2024 (14:29 IST)
ಬೆಂಗಳೂರು: ಮುಂದಿನ ಐದು ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.  

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಗ್ಲಾದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆ ನೀಡಿದ್ದ ಅಮೂಲ್ಯ ಕಿರೀಟ ಕಳ್ಳತನ