Publish Date: Sat, 22 Aug 2026 (21:35 IST)
Updated Date: Sat, 22 Aug 2026 (21:40 IST)
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಅವರು ಆನೆ ದಾಳಿಗೆ ಬಲಿಯಾದ ಪ್ರವಾಸಿಗ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಾಯಿಯನ್ನು ಅಟ್ಟಾಡಿಸಿಕೊಂಡ ಬಂದ ಕಾಡಾನೆ, ಏಕಾಏಕಿ ಪ್ರವಾಸಿಗನ ಮೇಲೆ ಅಟ್ಯಾಕ್ ಮಾಡಿದೆ.
ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವಾಸಿಗನನ್ನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಆತ ಮೃತಪಟ್ಟಿದ್ದಾರೆ. ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ ಕಾಡಾನೆ ಸಂಚಾರದ ಬಗ್ಗೆ ಭಯದ ವಾತಾವರಣ ಮನೆಮಾಡಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ