ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಟವೆಲ್ ಹಾಕಿಲ್ಲ: ಆರ್. ಅಶೋಕ

Webdunia
ಭಾನುವಾರ, 10 ಅಕ್ಟೋಬರ್ 2021 (13:12 IST)
ಬೆಂಗಳೂರು : 'ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್ ತಮಗೆ ಬಿಟ್ಟು ಕೊಡುವಂತೆ ಕೇಳಿದರು.

ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ' ಎಂದು ಆರ್. ಅಶೋಕ ಹೇಳಿದರು.
'ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸೋಮಣ್ಣ ಸರಿಯಾಗಿ ಹೇಳಿದ್ದಾರೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಅವರು ಸಭೆ ಕರೆದ ಹಿಂದಿನ ದಿನ ಅರ್ಧ ಗಂಟೆ ಮಾತನಾಡಿದ್ದೆವು. ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸದಲ್ಲಿದ್ದರೆ ಸಭೆಗೆ ಹೋಗಲು ಆಗುವುದಿಲ್ಲ. ಉಳಿದಂತೆ ಶಾಸಕರೇ ಸಭೆ ಕರೆದರೂ ನಾನು ಹೋಗುತ್ತೇನೆ' ಎಂದು ಹೇಳಿದರು.
'ನನ್ನ ಇಲಾಖೆಯನ್ನು ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ನಾನು ತಲೆ ಹಾಕುವುದಿಲ್ಲ. ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚಿಸಲು ಹೇಳಿದ್ದಾರೆ. ಅದನ್ನಷ್ಟೇ ಮಾಡಿದ್ದೇನೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments