Publish Date: Fri, 21 Aug 2026 (12:25 IST)
Updated Date: Fri, 21 Aug 2026 (12:25 IST)
ಬೆಂಗಳೂರು: ಗೀತು ಮೋಹನ್‌ದಾಸ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್‌ಅಪ್ಸ್ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್‌ಗೆ ವಿಶ್ವದಾದ್ಯಂತ ಅದ್ಭುತವಾದ ಮತ್ತು ಅತಿ ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಭಾರತದಲ್ಲಿ ಅಧಿಕೃತ ಮುಂಗಡ ಬುಕಿಂಗ್ ಆರಂಭವಾಗುವುದಕ್ಕೂ ಮುನ್ನವೇ, ಅಮೆರಿಕ ಸೇರಿದಂತೆ ಕೆಲವೊಂದು ವಿದೇಶಿ ಮಾರುಕಟ್ಟೆಗಳಲ್ಲಿ ಪ್ರಿ-ಸೇಲ್ಸ್ ಮೂಲಕವೇ ಚಿತ್ರವು ಲಕ್ಷಾಂತರ ಡಾಲರ್‌ಗಳ ಟಿಕೆಟ್‌ಗಳನ್ನು ಮಾರಾಟ ಮಾಡಿ ಹೊಸ ದಾಖಲೆ ಸೃಷ್ಟಿಸುತ್ತಿದೆ. ದೇಶಾದ್ಯಂತ ಚಿತ್ರದ ಮುಂಗಡ ಬುಕಿಂಗ್ ಪ್ರಕ್ರಿಯೆಯು ಅಧಿಕೃತವಾಗಿ ತೆರೆದುಕೊಂಡಿದ್ದು, ಫ್ಯಾನ್ಸ್‌ಗಳಿಂದ ಮುಗಿಬಿದ್ದು ಟಿಕೆಟ್ ಕಾಯ್ದುಕೊಳ್ಳುವ ಪ್ರಯತ್ನ ನಡೆಯುತ್ತಿದೆ.
ವಿಶ್ವದಾದ್ಯಂತ ಸುಮಾರು 12,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದು ಭಾರತೀಯ ಸಿನಿಮಾಗಳಲ್ಲೇ ಅತ್ಯಂತ ದೊಡ್ಡ ಮಟ್ಟದ ಬಿಡುಗಡೆಗಳಲ್ಲಿ ಒಂದಾಗಿದೆ. ಸಿನಿಮಾದ ಪ್ರಚಾರ ಹಾಗೂ ಟ್ರೇಲರ್‌ಗೆ ಸಿಕ್ಕಿರುವ ಅಪಾರ ಜನಮನ್ನಣೆಯು ಇದರ ಮುಂಗಡ ಬುಕಿಂಗ್ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.
ಕೆಜಿಎಫ್ ಚಾಪ್ಟರ್ 2 ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಯಶ್ ನಟಿಸುತ್ತಿರುವ ಸಿನಿಮಾ ಇದಾಗಿರುವುದರಿಂದ, ಗೀತು ಮೋಹನ್‌ದಾಸ್ ಅವರ ವಿಭಿನ್ನ ಮೇಕಿಂಗ್ ಹಾಗೂ ಕ್ರೈಮ್-ಥ್ರಿಲ್ಲರ್ ಕಥಾಹಂದರಿಯನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
ಸಿನಿಮಾವು ಆಗಸ್ಟ್ 26, 2026 ರಂದು ವಿಶ್ವದಾದ್ಯಂತ ಭರ್ಜರಿಯಾಗಿ ತೆರೆಕಾಣಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಮುಂತಾದ ದೊಡ್ಡ ತಾರಾಗಣವಿದೆ.
ಸೆನ್ಸಾರ್ ಮಂಡಳಿಯಿಂದ ಈ ಚಿತ್ರಕ್ಕೆ 'ಎ' ಪ್ರಮಾಣಪತ್ರ ಸಿಕ್ಕಿದ್ದು, ಇದು ಕೇವಲ ವಯಸ್ಕರಿಗಾಗಿ ನಿರ್ಮಿಸಲಾದ ಗ್ಯಾಂಗ್‌ಸ್ಟರ್ ಕಥೆಯಾಗಿದೆ. ನೀವು ಹತ್ತಿರದ ಥಿಯೇಟರ್‌ಗಳು ಅಥವಾ ಬುಕ್‌ಮೈಶೋಮುಂತಾದ ಆನ್‌ಲೈನ್ ಟಿಕೆಟಿಂಗ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಮುಂಗಡವಾಗಿ ಟಿಕೆಟ್‌ಗಳನ್ನು ಬುಕ್ ಮಾಡಿಕೊಳ್ಳಬಹುದು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ