ಮೇವಿಗೆ ವಿದ್ಯುತ್ ತಂತಿ ಸ್ಪರ್ಶದಿಂದ ಟ್ರ್ಯಾಕ್ಟರ್ ಭಸ್ಮ

Webdunia
ಸೋಮವಾರ, 3 ಏಪ್ರಿಲ್ 2023 (09:44 IST)
ಚಿಕ್ಕೋಡಿ : ಟ್ರ್ಯಾಕ್ಟರ್ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮೇವಿಗೆ ವಿದ್ಯುತ್ ತಂತಿ  ತಗುಲಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೋಳಿಹಟ್ಟಿ ಗ್ರಾಮದಲ್ಲಿ ನಡೆದಿದೆ.
 
ಹುಲ್ಲೋಳಿಹಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಪಾಯ ಮಟ್ಟ ಮೀರಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಮೇವು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಟ್ರಾಲಿಯಲ್ಲಿ ಇದ್ದ ಮೇವು ನೋಡು ನೋಡುತ್ತಿದ್ದಂತೆಯೇ ರಸ್ತೆ ಮಧ್ಯೆ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments