Publish Date: Fri, 15 May 2026 (17:35 IST)
Updated Date: Fri, 15 May 2026 (17:38 IST)
ಕೊಪ್ಪಳ: ಟ್ರಾಕ್ಟರ್ ಎದುರು ಬಂದು ಟ್ರಾಂಕರ್‌ಗೆ ಗುದ್ದಿದ ಪರಿಣಾಮ 6ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಅಪಘಾತ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆಯಿಂದ ಟ್ರಾಕ್ಟರ್ ಕೆಳಗಡೆ ಬಿದ್ದಿದ್ದು, ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದ್ದು ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಕೆಲವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಯ ದೇವಿ ದರ್ಶನ ಪಡೆಯಲು ವಿಜಯನಗರ ಜಿಲ್ಲೆಯ 15ಕ್ಕೂ ಹೆಚ್ಚು ಜನ ಭಕ್ತರು ಹೊಸಪೇಟೆಯಿಂದ ಹುಲಿಗಿಯ ಬರುವಾಗ ಈ ಅವಘಡ ಸಂಭವಿಸಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ