Publish Date: Mon, 08 Aug 2022 (16:03 IST)
Updated Date: Mon, 08 Aug 2022 (16:06 IST)
ನಗರದ ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ಪಟ್ಟಣದಲ್ಲಿ ಅಧಿಕ ಮಳೆಯಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿಯೇ ತರಕಾರಿ ಮಾರಾಟಕ್ಕೆ ಮಾರುಕಟ್ಟೆಗೆ ವ್ಯಾಪಾರಸ್ಥರು ಬಂದಿದ್ದು, ಅಧಿಕ ಮಳೆಯಿಂದ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಪರದಾಡಿದ್ರು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.