ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ಹಿನ್ನೆಲೆ ಏರ್ಶೋ ವೀಕ್ಷಿಸಲು ಸಾರ್ವಜನಿಕರಿಗೆ ಇಂದು ಅವಕಾಶ ನೀಡಲಾಗಿದೆ. ಪಾಸ್ ಪಡೆದು ಏರ್ಶೋ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಿರುವ ಹಿನ್ನೆಲೆ, ಇಂದು ಬೆಂಗಳೂರಿನ ಕೆಲವೆಡೆ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಿದೆ. ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿದಿದ್ದ ಬೆಂಗಳೂರು ಟ್ರಾಫಿಕ್ ಪೊಲೀಸ್ ಟ್ರಾಫಿಕ ಕಿರಿಕಿರಿ ತಪ್ಪಿಸಲು ಬದಲಿ ಮಾರ್ಗದ ವ್ಯವಸ್ಥೆಯನ್ನ ಮಾಡಿದ್ದಾರೆ. ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದ್ದು, ಏರ್ಶೋ ನೋಡಲು ಬರುವವರಿಗೆ GKVK ಮತ್ತು ಜಕ್ಕೂರಿನಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ.