Select Your Language

Notifications

webdunia
webdunia
webdunia
webdunia

ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ
ಬೆಂಗಳೂರು , ಸೋಮವಾರ, 8 ಮೇ 2023 (08:32 IST)
ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.
 
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ ಹಂತದಲ್ಲಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಅವರು, ಬಳಿಕ ನಂಜನಗೂಡು ತಾಲ್ಲೂಕಿನ ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಅದಾದ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ಅಲ್ಲಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಚಾಮರಾಜನಗರ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. 

ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಅನ್ವಯಿಸುವಂತೆ ರಸ್ತೆ ಸಂಚಾರದಲ್ಲಿ ಬದಲಾವಣೆ ಕಲ್ಪಿಸಲಾಗಿದೆ.

ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಏSಖಖಿಅ ಮಾಧ್ಯಮ ಪ್ರಕಟಣೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಮಪಾತ : ಮೂವರು ಸಾವು, 9 ಮಂದಿಗೆ ಗಾಯ!