Publish Date: Fri, 13 May 2022 (18:50 IST)
Updated Date: Fri, 13 May 2022 (18:53 IST)
ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಟವಶಾತ್ ಅವಘಡದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ನಿನ್ನೆ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ವೇದಿಕೆ ಮೇಲೆ ಹಾಕಿದ್ದ ಲೈಟಿಂಗ್ ಟ್ರೇಸ್ ಮುರಿದು ಬಿದ್ದಿದೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಾಜ್ಯಸಭಾ ಸದಸ್ಯ ಕಡಾಡಿ ಅವಘಡದಿಂದ ಪಾರಾಗಿದ್ದಾರೆ.ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, 'ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಆಕಸ್ಮಿಕ ಅವಘಡ ಸಂಭವಿಸಿತು. ಮೂವರಿಗೆ ಗಾಯಗಳಾಗಿದ್ದು, ನಾವೆಲ್ಲರೂ ಬಚಾವ್ ಆಗಿದ್ದೇವೆ.ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ' ಎಂದರು.